Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಸೆಂಬರ್ 8 ರಿಂದ 12 ರವರೆಗೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ
    ಇತ್ತೀಚಿನ ಸುದ್ದಿ

    ಡಿಸೆಂಬರ್ 8 ರಿಂದ 12 ರವರೆಗೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

    November 27, 2023
    Share

    ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ವಿದ್ವಾಂಸ ಗುರುರಾಜ ಕರಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

    ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್, ಬಳಗದವರಿಂದ ನೃತ್ಯ ಪ್ರದರ್ಶನವಿದೆ. ಡಿಸೆಂಬರ್ 12ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೊದ ಅಧ್ಯಕ್ಷ ಎಸ್.ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಗಮಕಿ ಎ.ವಿ.ಪ್ರಸನ್ನ ಅಧ್ಯಕ್ಷತೆ ವಹಿಸುವರು. ಹೊನ್ನಾವರದ ನಿವೃತ್ತ ಉಪನ್ಯಾಸಕ ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ  ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಡಿಸೆಂಬರ್ 8ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಧರ್ಮಸ್ಥಳ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್‌ನಂದನ್ ಉದ್ಘಾಟಿಸುವರು. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ.10ರಂದು ಸಂಜೆ 7ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ.

    ಡಿಸೆಬರ್ 8ರಂದು ಹೊಸಕಟ್ಟೆ ಉತ್ಸವ, 9ರಂದು ಕೆರೆಕಟ್ಟೆ ಉತ್ಸವ, 10ರಂದು ಲಲಿತೋದ್ಯಾನ ಉತ್ಸವ, 11ರಂದು ಕಂಚಿಮಾರುಕಟ್ಟೆ ಉತ್ಸವ, 12ರಂದು ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, 13ರಂದು ಸಂಜೆ 7ರಿಂದ ಭಗವಾನ್ ಶ್ರೀಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಸಮವಸರಣ ಪೂಜೆ ನಡೆಯಲಿದೆ.

    Post Views: 178

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.