Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು
    ಇತ್ತೀಚಿನ ಸುದ್ದಿ

    4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು

    November 28, 2023
    Share

    4ನೇ ತರಗತಿಯ ವಿದ್ಯಾರ್ಥಿಗೆ ಆತನ ಮೂವರು ಸಹಪಾಠಿಗಳೇ ಕೈವಾರದಿಂದ 108 ಬಾರಿ ಚುಚ್ಚಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ನವೆಂಬರ್ 24ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಒಬ್ಬ ವಿದ್ಯಾರ್ಥಿಯ ಮೇಲೆ ಇತರ ಮೂವರು ಸಹಪಾಠಿಗಳು ಕೈವಾರದಿಂದ 108 ಬಾರಿ ಹಲ್ಲೆ ನಡೆಸಿರುವುದಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ತಿಳಿಸಿದ್ದಾರೆ. ಈ ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳು ಹಿಂಸಾತ್ಮಕ ವರ್ತನೆ ತೋರಿರುವುದರ ಹಿಂದಿನ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೋರ್ವಾಲ್ ಹೇಳಿದರುನಡೆದ ಘಟನೆ ಬಳಿಕ ನನ್ನ ಮಗನಿಗೆ ಭೀತಿ ಉಂಟಾಗಿದೆ. ನನ್ನ ಮಗ ಮನೆಗೆ ಹಿಂದಿರುಗಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂಬುದು ನನಗೆ ಇನ್ನೂ ತಿಳಿದುಬಂದಿಲ್ಲ. ಶಾಲೆಯ ಆಡಳಿತ ಮಂಡಳಿಯೂ ಕೂಡಾ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತಿಲ್ಲ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ. ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿದ ಬಳಿಕ ಗಾಯಗೊಂಡ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಎಲ್ಲಾ ಮಕ್ಕಳು ಕೂಡಾ 10 ವರ್ಷದೊಳಗಿನವರು. ಈ ಬಗ್ಗೆ ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

    Post Views: 303

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.