ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳತಿಂದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ , ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ . ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ , ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ . ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ .