ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಅಜೀಜ್ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು.
ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಜೀಜ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.
ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.