ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂದು ಗುರುತಿಸಲಾಗಿದೆ. ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೆಬಲ್ ಗಣೇಶ್ ಪ್ರಸಾದ್ ಮತ್ತು ಕಾನ್ ಸ್ಟೆಬಲ್ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.