Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಡಾಂಬರ್ ಕಳವು ಮಾಡುತ್ತಿದ್ದ ಹತ್ತು ಮಂದಿಯ ಬಂಧನ – ಆರು ಟ್ಯಾಂಕರ್ ಲಾರಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಡಾಂಬರ್ ಕಳವು ಮಾಡುತ್ತಿದ್ದ ಹತ್ತು ಮಂದಿಯ ಬಂಧನ – ಆರು ಟ್ಯಾಂಕರ್ ಲಾರಿಗಳು ವಶಕ್ಕೆ

    December 10, 2023
    Share

    ಬಂಟ್ವಾಳ: ಇಲ್ಲಿನ ಕಡೇಶ್ವಾಲ್ಯದ ಅಮೈ ಎಂಬಲ್ಲಿ ಎಂ.ಆ‌ರ್.ಪಿ.ಎಲ್ ಸಂಸ್ಥೆಯಿಂದ ಡಾಂಬರ್ ತುಂಬಿದಿಕೊಂಡು ಬಂದಿದ್ದ ಟ್ಯಾಂಕರ್‌ಗಳಿಂದ ಅಕ್ರಮವಾಗಿ ಬೇರೆ ಟ್ಯಾಂಕರ್‌ಗಳಿಗೆ ಡಾಂಬರ್ ವರ್ಗಾಯಿಸುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು ಬಂಧಿಸಿದ್ದಾರೆ. ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ, ಮಹಮ್ಮದ್ ಇಮ್ರಾನ್, ಅಶ್ರಫ್ ಎಂ., ವೀರೇಂದ್ರ ಎಸ್.ಆ‌ರ್., ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾ‌ರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಬಂಧಿತ ಆರೋಪಿಗಳು. ಸೆನ್ ಹಾಗೂ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿ ಈ ದಾಳಿ ನಡೆಸಿ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಉಡುಪಿ ಮೂಲದ ವಿಜಯಕುಮಾರ್ ಶೆಟ್ಟಿ ಈ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿದೆ. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ ಎಂಬಾತನೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಟ್ಯಾಂಕರ್ ನಿಂದ ಡಾಂಬರ್ ಅನ್ನು ಕಳುವುಗೈಯುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರು ಟ್ಯಾಂಕರ್ ಲಾರಿಗಳನ್ನು, ಡಾಂಬರ್ ಕಳ್ಳತನ ಮಾಡಲು ಉಪಯೋಗಿಸುತ್ತಿದ್ದ ಒಂದು ತೂಕ ಮಾಪನ, ಗ್ಯಾಸ್ ಸಿಲಿಂಡರ್, ಕಬ್ಬಿಣದ ಟ್ಯಾಂಕ್ ಹಾಗೂ ಆರೋಪಿಗಳ 9 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 253

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.