ಮಂಗಳೂರು: ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ.
ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿ ಇರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಆಂಡ್ ರೆಸ್ಟೋರೆಂಟ್ ಗಳನ್ನು ಮತ್ತು ಎಲ್ಲಾ ವಿವಿಧ ಅಮಲು ಪದಾರ್ಥಗಳ ಮಾರಾಟವನ್ನು ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.