ಮಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ವ್ಯಕ್ತಿಯೋರ್ವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ಬೆಂಗಳೂರಿನ 14 ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.
2022ರ ಜು. 26ರಂದು ಈತ ಬೇರೆ ಸಂಖ್ಯೆಯ ಆಧಾರ್ ಕಾರ್ಡ್ ಮೂಲಕ ಜಾಮೀನು ಶ್ಯೂರಿಟಿ ನೀಡಿದ್ದ. ಈತನ ದಾಖಲೆ ಪರಿಶೀಲನೆ ನಡೆಸಿದಾಗ ಈತ ವಿವಿಧೆಡೆ ಇದೇ ರೀತಿ 14 ಪ್ರಕರಣಗಳಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಜಾಮೀನು ಶ್ಯೂರಿಟಿ ನೀಡಿರುವುದು ಗೊತ್ತಾಗಿದೆ.ಇಷ್ಟು ಮಾತ್ರವಲ್ಲ ಇತ್ತ ಮಂಗಳೂರಿನ ಕಸಬಾ ಬೆಂಗ್ರೆಯ ಮೊಯಿದ್ದೀನ್ ನಾಸೀರ್ (46) ನ. 6ರಂದು ಜಾಮೀನು ಶ್ಯೂರಿಟಿ ನೀಡಿದ್ದು ಈತನ ದಾಖಲೆಗಳ ಪರಿಶೀಲನೆ ವೇಳೆ ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ 5 ಮಂದಿಗೆ ನಕಲಿ ಆಧಾರ್ ಕಾರ್ಡ್ ಮತ್ತು ನಕಲಿ ಆರ್ಟಿಸಿ ಬಳಸಿ ಶ್ಯೂರಿಟಿದಾರನಾಗಿದ್ದಾರೆ ಎಂದು ತಿಳಿದು ಬಂದಿದೆ.