ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಪ್ಯಾಂಟ್ ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.