Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸೈನಿಕನೆಂದು ನಂಬಿಸಿ ಹಿರಿಯ ನಾಗರಿಕರೊಬ್ಬರಿಗೆ 2.41 ಲಕ್ಷ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸೈನಿಕನೆಂದು ನಂಬಿಸಿ ಹಿರಿಯ ನಾಗರಿಕರೊಬ್ಬರಿಗೆ 2.41 ಲಕ್ಷ ವಂಚನೆ

    December 19, 2023
    Share

    ಮಂಗಳೂರು: ಸೈನಿಕನೆಂದು ನಂಬಿಸಿ ಹಿರಿಯ ನಾಗರಿಕರೊಬ್ಬರಿಗೆ 2.41 ಲಕ್ಷ ರೂ.‌ ವಂಚಿಸಿರುವ ಆರೋಪದಲ್ಲಿ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ನಾಗರಿಕರು ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಫ್ಲ್ಯಾಟ್ ಬಾಡಿಗೆ ಕೊಡುವ ವಿಚಾರದಲ್ಲಿ ಒಂದ MAGIC BRICKನಲ್ಲಿ ಜಾಹೀರಾತು ನೀಡಿದ್ದರು. ಡಿಸೆಂಬರ್ 8ರಂದು ಅಪರಿಚಿತನೊಬ್ಬ ಇವರ ಮೊಬೈಲ್ ಫೋನ್‌ಗೆ ಕರೆ ಮಾಡಿ ತನ್ನ ಹೆಸರು ಆಶೀಶ್ ಕುಮಾರ್. ತಾನು ಭಾರತೀಯ ಸೇನೆಯಲ್ಲಿ ನೌಕರ ಎಂದು ಪರಿಚಯಿಸಿದ್ದಾನೆ‌. ಅಪಾರ್ಟ್ ಮೆಂಟ್ ಖಾಲಿ ಇರುವ ಬಗ್ಗೆ ಮಾತನಾಡಿದ್ದಾನೆ. ಬಳಿಕ ಬಾಡಿಗೆ ವಿಚಾರವಾಗಿ ವಿಚಾರಿಸಿ ಮುಂಗಡ ಹಣ ಪಾವತಿಸುವುದಾಗಿಯೂ ಹಾಗೂ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ಹಣ ಸಂದಾಯವಾಗುವುದಾಗಿ ತಿಳಿಸಿದ್ದಾನೆ. ಮೊದಲಿಗೆ 1/-ರೂ,5/-ರೂ ,49,999/-ರೂ ಮತ್ತು 49994/-ರೂಗಳ UPI CODE ಗಳನ್ನು ಅವರಿಗೆ ವಾಟ್ಸ್ಆ್ಯಪ್ ನಲ್ಲಿ ಕಳುಹಿಸಿದ್ದಾನೆ. ಇದನ್ನು ಸತ್ಯವೆಂದು ಭಾವಿಸಿ ಹಿರಿಯ ನಾಗರಿಕರು ತಮ್ಮ ಹೆಚ್ ಡಿ ಎಫ್ ಸಿ ಖಾತೆಯಿಂದ ಗೂಗಲ್ ಪೇ ಮುಖಾಂತರ ಡಿಸೆಂಬರ್ 8 ರಂದು 1,41,999 ರೂ. ಪಾವತಿಸಿದ್ದಾರೆ. ಡಿ.9 ರಂದು ಈ ಅಪರಿಚಿತ ಮತ್ತೊಮ್ಮೆ ಕರೆ ಮಾಡಿ ಅದೇ ರೀತಿ ಮತ್ತೊಮ್ಮೆ ಪಾವತಿ ಮಾಡಬೇಕೆಂದು ಹಾಗೂ ಈ ಹಣ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ದೊರೆಯುವುದಾಗಿ ನಂಬಿಸಿದ್ದಾನೆ‌. ಅದೇ ರೀತಿ ಐಎಂಪಿಎಸ್ 1,00,000 ರೂ. ಹಣ ಪಾವತಿಸಿರುತ್ತಾರೆ. ಹೀಗೆ ಅಪರಿಚಿತನೊಬ್ಬ ಆಶೀಶ್ ಕುಮಾರ್ ಎಂದು ಪರಿಚಯಿಸಿಕೊಂಡು ತಾನು ಆರ್ಮಿ ಯಲ್ಲಿ ನೌಕರನೆಂದು ನಂಬಿಸಿ ಆನ್ ಲೈನ್ ಮೂಲಕ 2,41,999 ರೂ.ವನ್ನು ಆನ್ ಲೈನ್ ಮುಖಾಂತರ ಮೋಸದಿಂದ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆ ಎಂದು ಸೆನ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

    Post Views: 157

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.