Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಯಜಮಾನಿಯರೇ ಗಮನಿಸಿ : ಈ ದಿನ ʻಗೃಹ ಲಕ್ಷ್ಮಿʼ 4ನೇ ಕಂತಿನ ಹಣ ಖಾತೆಗೆ ಜಮಾ
    ಇತ್ತೀಚಿನ ಸುದ್ದಿ

     ಯಜಮಾನಿಯರೇ ಗಮನಿಸಿ : ಈ ದಿನ ʻಗೃಹ ಲಕ್ಷ್ಮಿʼ 4ನೇ ಕಂತಿನ ಹಣ ಖಾತೆಗೆ ಜಮಾ

    December 19, 2023
    Share

    ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳು ಮನೆಯ ಯಜಮಾನಿ ಖಾತೆಗೆ ಜಮಾ ಆಗಿದ್ದು, ಇದೀಗ 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ.

    ಈಗಾಗಲೇ ಮೂರನೇ ಕಂತು ಪಡೆದಿರುವ ಯಜಮಾನಿಯರ ಖಾತೆಗೆ ಇದೀಗ ನಾಲ್ಕನೇ ಕಂತಿನ ಹಣ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಮೂಲಗಳ ಪ್ರಕಾರ ಈ ವಾರದಲ್ಲೇ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುವ ಸಾಧ್ಯತೆ ಇದೆ.

    ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಈ ಹಿಂದೆ ಹೇಳಿದಂತೆ ಪ್ರತಿ ತಿಂಗಳು 20 ರಿಂದ 30ನೇ ತಾರೀಖಿನೊಳಗೆ ಹಣ ಜಮೆಯಾಗಲಿದೆ. ಹೀಗಾಗಿ ಮುಂದಿನ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

    ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರನ್ನು ಸಂಪರ್ಕಿಸಬಹುದಾಗಿದೆ. ಇದುವರೆಗೆ ಯಾರಿಗೆ ಹಣ ಬಂದಿಲ್ಲ, ಅಂತಹವರಿಗೆ ಡಿಸೆಂಬರ್ ತಿಂಗಳೊಳಗೆ ಹಣ ಜಮಾ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ ಡಿಸೆಂಬರ್ ಒಳಗೆ ಹಣ ಹಾಕುವ ವ್ಯವಸ್ಥೆ ಮಾಡಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    Post Views: 324

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.