ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಕೋವಿಡ್ ಭೀತಿ ಹಿನ್ನೆಲೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಜಿ.
ಪರಮೇಶ್ವರ್ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ ಇಂತಹ ಸಂದರ್ಭದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು ಎಂದರು. ಬೆಂಗಳೂರಿನ ಎಲ್ಲಾ ಕಡೆ ಭದ್ರತೆ ವಹಿಸುತ್ತೇವೆ. ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗುತ್ತದೆ’ ಎಂದರು.