ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವರು ಬಲಿಯಾಗಿದ್ದಾರೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ 51 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿಯಾಗಿದ್ದ ಇವರು ಡಿ.22ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರಿಗೆ ಕೊರೊನಾ ಸೋಂಕು ದೃಢಗೊಂಡಿತ್ತು. ಜ್ವರ, ಕಫ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿಂದೆ ಪಾರ್ಶ್ವವಾಯು ಪೀಡಿತರಾಗಿದ್ದ ಇವರಿಗೆ ಬಿ.ಪಿ, ಅಸ್ತಮಾ ಸಮಸ್ಯೆಯೂ ಇತ್ತು. ಹೀಗೆ ಅನೇಕ ಕಾಯಿಲೆಯಿಂದ ಬಳಲುತ್ತಿದ್ದ ಇವರು ಕೊರೊನಾ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಸದ್ಯ ಮೃತರ ಮನೆಯಲ್ಲಿರುವ ಮೂವರು ಕುಟುಂಬ ಸದಸ್ಯರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಪಾಸಣೆ ಮಾಡಬೇಕೆಂದು ಸೂಚಿಸಲಾಗಿದೆ. ಅಲ್ಲದೆ, ಕೊರೊನಾ ಸೋಂಕು ದೃಢಗೊಂಡಲ್ಲಿ ಹೋಮ್ ಕ್ವಾರಂಟೈನ್ ಆಗಬೇಕೆಂದು ಸೂಚಿಸಲಾಗಿದೆ. ಸದ್ಯ ದ.ಕ.ಜಿಲ್ಲೆಯಲ್ಲಿ ಎಂಟು ಮಂದಿ ಕೊರೊನಾ ಸೋಂಕಿತರಿದ್ದಾರೆ.