Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ‘ಆ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ’- ಸದಾನಂದ ಗೌಡ
    ಇತ್ತೀಚಿನ ಸುದ್ದಿ

    ಕಡಬ: ‘ಆ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ’- ಸದಾನಂದ ಗೌಡ

    December 27, 2023
    Share

    ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ.

    ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಸೇರಿ ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗಾಗಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು. “ನಾನು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಹೇಳಿದ್ದೇ ನನ್ನ ಸ್ಥಾನಕ್ಕೆ ಮುಳುವಾಯಿತು ಎಂದು ಬೇಸರ ವ್ಯಕ್ತಪಡಿಸಿದರು

    ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿದ ಅಂದಿನ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸದಾನಂದ ಗೌಡ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ನಾನು ಚುನಾವಣೆಗೆ ಸ್ಪರ್ಧಿಸುವುದರಿಂದ ನಿವೃತ್ತನಾಗುತ್ತಿದ್ದೇನೆ, ನನಗೆ ಇನ್ನು ಯಾವ ಚುನಾವಣೆಗಳಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ. ಆದರೂ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ಈಗಿನ ರಾಜಕೀಯ ವ್ಯವಸ್ಥೆಯನ್ನು ಸಹಿಸಲಾಗದಿದ್ದರೂ ಪಕ್ಷವೇ ನನ್ನ ಸರ್ವಸ್ವ ಎಂದು ಹೇಳುತ್ತೇನೆ ಎಂದರು.

    ಇಂದು, ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆಯಿಲ್ಲ, ಮಾತು ಮತ್ತು ದುಡ್ಡು ತುಂಬಾ ಮುಖ್ಯವಾಗಿದೆ, ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕೀಯ ಅನಿವಾರ್ಯ. ನಮ್ಮ ಪಕ್ಷ ಉಳಿದ ಪಕ್ಷಗಳಿಗಿಂತ ಉತ್ತಮವಾಗಿರುವ ಕಾರಣ ಪಕ್ಷವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

    Post Views: 675

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.