Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಲಾರಿಯೊಳಗೆ ಚಾಲಕ ಸಾವು- ಎರಡು ದಿನದ ಬಳಿಕ ಪ್ರಕರಣ ಬೆಳಕಿಗೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಲಾರಿಯೊಳಗೆ ಚಾಲಕ ಸಾವು- ಎರಡು ದಿನದ ಬಳಿಕ ಪ್ರಕರಣ ಬೆಳಕಿಗೆ

    December 30, 2023
    Share

    ಉಪ್ಪಿನಂಗಡಿ: ಇಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಹೃದಯಾಘಾತದಿಂದ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಚನ್ನಪಟ್ಟಣದ ಖಲೀಲ್‌ ಖಾನ್‌ (58) ಮೃತ ವ್ಯಕ್ತಿ.

    ಮೈಸೂರಿನಿಂದ ಬಿ.ಸಿ. ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಅವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ.

    ಮೃತ ಖಲೀಲ್‌ ಖಾನ್‌ ಬುಧವಾರ ರಾತ್ರಿ ತನ್ನ ಮನೆಗೆ ಪೋನಾಯಿಸಿ ತನಗೆ ಎದೆ ನೋವು ಕಾಣಿಸಿರುವುದರಿಂದ ಉಪ್ಪಿನಂಗಡಿಯಲ್ಲಿ ವಿಶ್ರಾಂತಿ ಪಡೆದು ನಾಳೆ ಬರುವೆನೆಂದು ತಿಳಿಸಿದ್ದು, ಗುರುವಾರ ಅವರು ಮನೆಗೆ ಹಿಂತಿರುಗದೇ ಇದ್ದ ಕಾರಣ ಅವರ ಪತ್ತೆಗಾಗಿ ಸಾಮಾಜಿಕ ಜಾಲತಾಣದ ಮೊರೆ ಹೋಗಲಾಯಿತು. ಈ ವೇಳೆ ಉಪ್ಪಿನಂಗಡಿಯ ರಾ.ಹೆ. 75ರಲ್ಲಿನ ಲೋಬೊ ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ನಿಲ್ಲಿಸಲಾದ ಲಾರಿಯನ್ನು ಪರಿಶೀಲಿಸಿದಾಗ ಅದರಲ್ಲಿ ವ್ಯಕ್ತಿಯೋರ್ವರು ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡುಬಂತು.

    ಸದಾ ಜನ ಸಂಚಾರವಿರುವ ಸ್ಥಳದಲ್ಲಿ ಲಾರಿಯೊಂದು ದಿನವಿಡೀ ನಿಂತಿರುವುದನ್ನು ಯಾರೂ ಗಮನಿಸದ ಕಾರಣಕ್ಕೆ ಲಾರಿಯೊಳಗೆ ಶವ ಎರಡು ದಿನಗಳ ಕಾಲ ಇರುವಂತಾಯಿತು. ಬಳಿಕ ಉಪ್ಪಿನಂಗಡಿಯ ಸಾಮಾಜಿಕ ಕಾರ್ಯಕರ್ತ ಫಾರೂಕ್‌ ಜಿಂದಗಿ ಹಾಗೂ ಉಪ್ಪಿನಂಗಡಿ ಎಸ್ಕೆಎಸ್ಸೆಸ್ಸೆಫ್ ವಿಖಾಯ ತಂಡದವರು ಲಾರಿಯಿಂದ ಮೃತದೇಹವನ್ನು ತೆಗೆದು, ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಇಲ್ಲಿನ ಮಾಲೀಕುದ್ದೀನಾರ್‌ ಮಸೀದಿಯಲ್ಲಿ ಮೃತದೇಹದ ಅಂತಿಮ ವಿಧಿ-ವಿಧಾನಗಳನ್ನು ನಡೆಸಿ, ಅವರ ಊರಿಗೆ ಮೃತದೇಹವನ್ನು ಕಳುಹಿಸಿದ್ದಾರೆ.

    Post Views: 226

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.