ಮಂಗಳೂರು: ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ವಿದೇಶಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದ್ದು, ತೈಲ ಸೋರಿಕೆ ಆತಂಕ ಎದುರಾಗಿದೆ.
ಸಿರಿಯಾದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್ ಗೆ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು.
ಸುಮಾರು 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಜೂನ್ 23ರಂದು ಮುಳುಗಿದೆ. ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ 15 ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ.
ಆದರೆ ಇದೀಗ ಹಡಗಿನಿಂದ ತೈಲ ಸೋರಿಕೆಯಾಗುವ ಆತಂಕ ಎದುರಾಗಿದೆ. ಇದರಿಂದ ಮತ್ಸ್ಯ ಸಂಕುಲ ನಾಶವಾಗುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೋಸ್ಟ್ ಗಾರ್ಡ್ ಕಟ್ಟೆಚ್ಚರ ಘೋಷಣೆ ಮಾಡಿದೆ. ಮತ್ತೊಂದೆಡೆ ತೈಲ ಸೋರಿಕೆಯಾದರೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಭೆ ನಡೆಸಲಾಗುತ್ತಿದೆ.