Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್..!
    Uncategorized

    ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್..!

    January 7, 2024
    Share

    ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಮೂರು ತಿಂಗಳ ಗರ್ಭಿಣಿಯನ್ನು ಪತಿಯೇ ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸುವ ನಾಟಕವಾಡಿದ್ದ.

    23 ವರ್ಷದ ಯಸೋಧಾ ಮೃತ ಮಹಿಳೆ. ಆರೋಪಿ ಪತಿ ತಿಪ್ಪೇಶ್ (28) ನನ್ನು ಪೊಲೀಸರು ಬಂಧಿಸಿದ್ದಾರೆ.

    ಯಶೋಧಾ ಹಾಗೂ ತಿಪ್ಪೇಶ್ ಸಂಬಂಧಿಗಳೇ ಆಗಿದ್ದು, ಪ್ರೀತಿಸಿ ಆರುತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ತಿಪ್ಪೇಶ್ ಬಗ್ಗೆ ಯಶೋಧಾ ಮನೆಯವರಿಗೆ ಒಳ್ಳೆ ಅಭಿಪ್ರಾಯವಿರಲಿಲ್ಲ. ಹಾಗಾಗಿ ಮದುವೆಗೆ ಒಪ್ಪಿರಲಿಲ್ಲ. ಆದರೂ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ತಿಪ್ಪೇಶ್ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದ. ಅಲ್ಲದೇ ಯಶೋಧಾ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ತವರಿಗೆ ಬಂದಿದ್ದ ಪತ್ನಿಯನ್ನು ತಿಪ್ಪೇಶ್ ವಾಪಾಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಜ.4ರಂದು ಅಪಘಾತದಲ್ಲಿ ಯಶೋಧಾ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಮಗಳ ಮೃತದೇಹ ಕಂಡು ಅನುಮಾನಗೊಂಡ ಯಶೋಧಾ ತಂದೆ ಚಂದ್ರಪ್ಪ, ಇದು ಅಪಘಾತವಲ್ಲ, ಕೊಲೆ ಎಂದು ದೂರು ದಾಖಲಿಸಿದ್ದರು.

    ಆರೋಪಿ ಪತಿ ತಿಪ್ಪೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಹೆಲ್ಮೆಟ್ ನಿಂದ ಹೊಡೆದು ಪತ್ನಿಯನ್ನು ಕೊಲೆಗೈದಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟಿದ್ದಾಗಿ ಬಾಯ್ಬಿಟ್ಟಿದ್ದಾನೆ.

    Post Views: 248

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.