Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವಿಟ್ಟು ಸಾಗಿಸಿದ ತಾಯಿ; ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಅರೆಸ್ಟ್
    ಇತ್ತೀಚಿನ ಸುದ್ದಿ

    ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವಿಟ್ಟು ಸಾಗಿಸಿದ ತಾಯಿ; ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಅರೆಸ್ಟ್

    January 9, 2024
    Share

    ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿ.

    ಸುಚನಾ ಸೇಠ್ ತನ್ನ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಹೋಟೆಲ್ ರೂಂ ಖಾಲಿ ಮಾಡಿ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಸುಚನಾ ಟ್ಯಾಕ್ಸಿಯತ್ತ ಸೂಟ್ ಕೇಸ್ ಹಿಡಿದು ಸಾಗುತ್ತಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಮಗುವನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಬೆಂಗಳೂರಿಗೆ ಹೊರಟಿದ್ದಾರೆ. ಸಿಬ್ಬಂದಿಗಳಿಗೆ ಅನುಮಾನ ಹೆಚ್ಚಾಗಿದೆ. ತಕ್ಷಣ ಅವರು ತಂಗಿದ್ದ ಹೋಟೆಲ್ ರೂಮ್ ಗೆ ಸ್ವಚ್ಛತೆಗೆ ಸಿಬ್ಬಂದಿ ಕಳುಹಿಸಿದ್ದಾರೆ. ಈ ವೇಳೆ ರೂಮ್ ನಲ್ಲಿ ರಕ್ತದ ಕಲೆಗಳು ಬಿದ್ದಿರುವುದು ಪತ್ತೆಯಾಗಿದೆ.

    ಹೋಟೆಲ್ ನವರು ಕೂಡಲೇ ಗೋವಾ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಟ್ಯಾಕ್ಸಿ ನಂಬರ್ ನ್ನು ಕೊಟ್ಟಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಟ್ಯಾಕ್ಸಿ ಚಾಲಕನನ್ನು ಪತ್ತೆ ಮಾಡಿ ಕರೆ ಮಾಡಿ ತೆರಳುತ್ತಿದ್ದ ಮಾರ್ಗದಲ್ಲಿಯೇ ಪೊಲೀಸ್ ಠಾಣೆ ಸಿಕ್ಕ ಕೂಡಲೇ ಟ್ಯಾಕ್ಸಿ ನಿಲ್ಲಿಸುವಂತೆ ಹೇಳಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಐನಮಂಗಲ ಠಾಣೆ ಬಳಿ ಚಾಲಕ ಕಾರು ನಿಲ್ಲಿಸುತ್ತಿದ್ದಂತೆ ಪೊಲೀಸರು ಸುಚನಾಳನ್ನು ವಶಕ್ಕೆ ಪಡೆದ ಪಡೆದಿದ್ದಾರೆ. ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಅರೆಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.

    ಗೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುಚನಾಳನ್ನು ಗೋವಾ ಪೊಲೀಸರಿಗೆ ಒಪ್ಪಿಸಲು ಸಿದ್ಧತೆ ನಡೆದಿದೆ.

    Post Views: 331

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.