ಜಿಲ್ಲಾಧಿಕಾರಿ ಕಚೇರಿಯಲ್ಲೇ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ನಿವಾಸಿ ಕುಮಾರ್ ಕಲ್ಲಪ್ಪ ಕೊಪ್ಪದ್ ಎಂಬ ವ್ಯಕ್ತಿ ವಾಟರ್ ಬಾಟಲಿನಲ್ಲಿ ವಿಷ ತೆಗೆದುಕೊಂಡು ಬಂದಿದ್ದನು.
ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಇಲ್ಲದ ವೇಳೆ ಈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸದ್ಯ ಆತನ ಸ್ಥಿತಿ ಗಂಭೀರವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.