Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!

    January 11, 2024
    Share

    ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲೆ ಬೆದರಿಕೆ ಒಡ್ಡಿದಾಗ ಗೊದ್ರೇಜ್ ನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯೊಂದರಲ್ಲಿ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 264

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.