Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅನಧಿಕೃತ ಬ್ಯಾನರ್ ಕಟೌಟ್ ಹಾಕಿದ್ರೆ ಕ್ರಿಮಿನಲ್ ಕೇಸ್
    ಇತ್ತೀಚಿನ ಸುದ್ದಿ

    ಮಂಗಳೂರು: ಅನಧಿಕೃತ ಬ್ಯಾನರ್ ಕಟೌಟ್ ಹಾಕಿದ್ರೆ ಕ್ರಿಮಿನಲ್ ಕೇಸ್

    January 18, 2024
    Share

    ಮಂಗಳೂರು ಮಹಾನಗರಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ ಮತ್ತು ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಆನಧಿಕೃತ ಬ್ಯಾನರ್ ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.

    ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದಲ್ಲದೆ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದಂತಾಗುತ್ತಿದೆ. ಅಲ್ಲದೇ, ವಿದ್ಯುತ್ ಅವಘಡಗಳು ಉಂಟಾಗಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇದೆ. ಕೆಲವೊಂದು ವಿವಾದಾತ್ಮಕ ಮತ್ತು ದ್ವೇಷ ಸಂದೇಶ ಸಾರುವ ಫ್ಲೆಕ್ಸ್‍ಗಳು ಅಳವಡಿಸುತ್ತಿರುವುದರಿಂದ ಶಾಂತಿ ಸುವ್ಯವಸ್ಥೆಗೆ ದಕ್ಕೆಯಾಗಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದೆ.

    ಆದ್ದರಿಂದ ಎಲ್ಲಾ ರೀತಿಯ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ಅಳವಡಿಸುತ್ತಿರುವುದನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ಮಹಾನಗರಪಾಲಿಕೆ ಆಧೀನದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಒಟ್ಟು 1084 ಅಧಿಕೃತ ಜಾಹೀರಾತು ಫಲಕಗಳಿದ್ದು, ಈ ಜಾಹೀರಾತು ಫಲಕಗಳನ್ನು ಬಳಕೆ ಮಾಡಿ ಜಾಹೀರಾತುಗಳನ್ನು ಪ್ರಕಟಿಸುವಂತೆ ಸಾರ್ವಜನಿಕರಿಗೆ ಕೋರಲಾಗಿದೆ. ಅನಧಿಕೃತ ಪ್ಲೆಕ್ಸ್, ಬ್ಯಾನರ್ ಇತ್ಯಾದಿಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ ಸಾರ್ವಜನಿಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆ, 1981 (The Karnataka Open Places (Prevention of Disfigurement) Act, 1981)ಪ್ರಕಾರ ಹಾಗೂ ಅನಧಿಕೃತ ಫಲಕಗಳ ಮೂಲಕ ಯಾವುದಾದರೂ ಶಾರ್ಟ್ ಸರ್ಕ್ಯೂಟ್ ಅಥವಾ ವಿದ್ಯುತ್ ಅವಘಡಗಳಾಗಿ ಪ್ರಾಣಹಾನಿ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ವ್ಯಕ್ತಿ ಅಥವಾ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.

    Post Views: 322

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.