Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ

    January 20, 2024
    Share

    ಪುತ್ತೂರು: 12 ವರ್ಷಗಳ ಹಿಂದೆ ಕ್ರಿಮಿನಲ್‌ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಮೋಹನ್ ಕುಮಾರ್ ಹೆಗ್ಡೆ ಯಾನೆ ಮೋಹನ್ (38) ಬಂಧಿತ ಆರೋಪಿ.ಆರೋಪಿಯನ್ನುಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2012 ರಲ್ಲಿ ಕ್ರಿಮಿನಲ್‌ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣ ಕುರಿತಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಾಗಿತ್ತು.ಆಗ ಆರೋಪಿ ಬಂಧಿತನಾಗಿದ್ದರೂ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು.ಪೊಲೀಸ್ ನಿರೀಕ್ಷಕ ರವಿ ಬಿ ಎಸ್ ಮತ್ತು ಉಪನಿರೀಕ್ಷಕ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ, ಹೆಡ್‌ ಕಾನ್ಸ್ ಟೆಬಲ್‌ ಮಧು ಕೆ. ಎನ್, ಹಾಗೂ ಹಕೀಂ ಅವರು ಕಾರ್ಯಾಚರಣೆ ನಡೆಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಪುತ್ತೂರಿನಲ್ಲಿ ವಶಕ್ಕೆ ಪಡೆದು ಬಂಧಿಸಿದ್ದಾರೆ.

    Post Views: 164

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.