Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕಲಿ ಮನೆ ದಾಖಲಾತಿ ಸೃಷ್ಟಿಸಿ ಕೋಟಿ ಕೋಟಿ ಲೋನ್ : ಏಜೆಂಟ್ ಗಳಿಗೆ ಸಹಕಾರ ನೀಡುತ್ತಿದ್ದ ವಿವಿಧ ಬ್ಯಾಂಕ್ ನ 4 ವ್ಯವಸ್ಥಾಪಕರ ಬಂಧನ
    ಇತ್ತೀಚಿನ ಸುದ್ದಿ

    ನಕಲಿ ಮನೆ ದಾಖಲಾತಿ ಸೃಷ್ಟಿಸಿ ಕೋಟಿ ಕೋಟಿ ಲೋನ್ : ಏಜೆಂಟ್ ಗಳಿಗೆ ಸಹಕಾರ ನೀಡುತ್ತಿದ್ದ ವಿವಿಧ ಬ್ಯಾಂಕ್ ನ 4 ವ್ಯವಸ್ಥಾಪಕರ ಬಂಧನ

    January 21, 2024
    Share

    ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯಲು ಏಜೆಂಟ್‌ಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ವಿವಿಧ ಬ್ಯಾಂಕ್‌ಗಳ ನಾಲ್ವರು ವ್ಯವಸ್ಥಾಪಕರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್‌, ಮುರಳೀಧರ್‌, ಶಶಿಕಾಂತ್‌, ರಾಕೇಶ್‌ ಬಂಧಿತರು.

    ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯುತ್ತಿದ್ದ ಏಜೆಂಟ್‌ಗಳ ವಿರುದ್ಧ ಪುಟ್ಟೇನಹಳ್ಳಿ ಹಾಗೂ ಹುಳಿಮಾವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್‌ ಇಲಾಖೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿತ್ತು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಐವರು ಏಜೆಂಟರುಗಳನ್ನು ವಿಚಾರಣೆ ನಡೆಸಿದಾಗ ಏಜೆಂಟರಿಗೆ ಸಾಲ ಪಡೆಯಲು ನೆರವಾಗುತ್ತಿದ್ದ ನಾಲ್ವರು ಬ್ಯಾಂಕ್‌ ಅಧಿಕಾರಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ನಾಲ್ವರು ಬ್ಯಾಂಕ್‌ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ಮಾಡಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

    ಒಂಟಿ ವೃದ್ಧರ ಹೆಸರಿನಲ್ಲಿರುವ ನಿವೇಶನ ಅಥವಾ ಮನೆ ಖರೀದಿಸುವ ನೆಪ ಮಾಡಿಕೊಂಡು ಬಂಧಿತ ಏಜೆಂಟರುಗಳು ನಕಲಿ ದಾಖಲೆ ಸೃಷ್ಟಿಸುತ್ತಿದ್ದರು. ನಂತರ ಬ್ಯಾಂಕ್‌ ಅಧಿಕಾರಿಗಳ ಮುಂದೆ ಅಸಲಿ ದಾಖಲೆಯೆಂದು ನಂಬಿಸಿ ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದರು. ಬ್ಯಾಂಕ್‌ ಅಧಿಕಾರಿಗಳು ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸದೇ ಸಾಲ ನೀಡುತ್ತಿದ್ದರು. ಏಜೆಂಟರ ಆಮೀಷಕ್ಕೊಳಗಾಗಿ ಬ್ಯಾಂಕ್‌ ಅಧಿಕಾರಿಗಳೂ ಅವರಿಗೆ ಸಾಲ ನೀಡಲು ಸಹಕರಿಸುತ್ತಿದ್ದರು

    ಹುಳಿಮಾವಿನಲ್ಲಿ ವೃದ್ಧೆಯೊಬ್ಬರ ಮನೆಯ ದಾಖಲೆ ಬಳಸಿಕೊಂಡು ಆರೋಪಿ ಏಜೆಂಟ್‌ ಗಳು ಬ್ಯಾಂಕ್‌ಗಳಿಂದ 1.50 ಕೋಟಿ ರೂ. ಸಾಲ ಪಡೆದಿದ್ದರು. ಮತ್ತೂಂದು ಪ್ರಕರಣದಲ್ಲಿ ಪುಟ್ಟೇನಹಳ್ಳಿಯಲ್ಲಿ ವೃದ್ಧೆಯೊಬ್ಬರ ಮನೆಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿ 3.85 ಕೋಟಿ ರೂ. ಸಾಲ ಪಡೆದಿದ್ದರು. ಹುಳಿಮಾವು ನಿವಾಸಿ ಅಂಡಾಳ್‌ ಕುಪ್ಪಣ್ಣ (85) ಎಂಬುವವರ ಮನೆ ಖರೀದಿಸುವ ನೆಪದಲ್ಲಿ ದಾಖಲೆ ಪಡೆದು ಬ್ಯಾಂಕ್‌ಗೆ ಸಲ್ಲಿಸಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. 2023ರ ಡಿಸೆಂಬರ್‌ನಲ್ಲಿ ಏಜೆಂಟರುಗಳ ಕಳ್ಳಾಟದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಪ್ರಕರಣವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಬಳಿಕ ಏಜೆಂಟರಾದ ಭಾಸ್ಕರ್‌ ಕೃಷ್ಣ, ಮಹೇಶ್‌, ಅರುಣ್‌, ದಿವಾಕರ್‌ ಅವರನ್ನು ಬಂಧಿಸಿದ್ದರು.

    Post Views: 232

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.