Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಕೆರೆಗೆ ಬಿದ್ದು 1 ನೇ ತರಗತಿಯ ವಿದ್ಯಾರ್ಥಿ ಸಾವು- ಮಗುವಿನ ಸಾವಿನಲ್ಲಿ ಸಂಶಯ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಕೆರೆಗೆ ಬಿದ್ದು 1 ನೇ ತರಗತಿಯ ವಿದ್ಯಾರ್ಥಿ ಸಾವು- ಮಗುವಿನ ಸಾವಿನಲ್ಲಿ ಸಂಶಯ

    January 24, 2024
    Share

    :ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಪೊರೋಳಿ ಎಂಬಲ್ಲಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

    ದಿವಂಗತ ನಾರಾಯಣ ಗೌಡ ಎಂಬವರ ಮಗನಾಗಿರುವ ರಕ್ಷಿತ್ ಉಪ್ಪಿನಂಗಡಿಯ ಖಾಸಗಿ ಶಾಲಾ 1 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆದಿತ್ಯವಾರದಂದು ತಾಯಿಯೊಂದಿಗೆ ತೋಟಕ್ಕೆ ಹುಲ್ಲು ತೆಗೆಯಲೆಂದು ಹೋದಾತ ತೋಟದಲ್ಲಿನ ಸ್ಪಿಂಕ್ಲರ್ ನೀರಿನಲ್ಲಿ ಸ್ನಾನ ಮಾಡುವ ಆಸೆ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದಕ್ಕೆ ನಿರಾಕರಣೆ ತೋರಿದ್ದ ತಾಯಿ ಆತನನ್ನು ಮನೆಗೆ ಕರೆದುಕೊಂಡು ಬಂದು ತಿಂಡಿ ನೀಡಿದ್ದರು. ತಿಂಡಿ ತಿನ್ನುತ್ತಲೇ ಈಗ ಬರುತ್ತೇನೆಂದು ತನ್ನ ಚಿಕ್ಕಮ್ಮನ ಬಳಿ ಹೇಳಿ ಹೋದ ಬಾಲಕ ಬಳಿಕ ನಾಪತ್ತೆಯಾಗಿದ್ದ.

    ಹುಡುಕಾಟ ನಡೆಸಿದಾಗ ಅವರ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಬಾಲಕನ ತಂದೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ನಿಧನರಾಗಿದ್ದು, ಆ ಬಳಿಕ ಕೌಟುಂಬಿಕ ವೈಮನಸ್ಸು ಮೂಡಿ ಮಗುವಿನ ಸಾವಿನಲ್ಲಿ ಸಂಶಯ ವ್ಯಕ್ತವಾದ ಕಾರಣ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ನಡೆಸಲಾಗಿ ತನಿಖೆ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

    Post Views: 237

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.