Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಉಡುಪಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    January 26, 2024
    Share

    ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ. ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದನು. ಬಳಿಕ ಈ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಹೆದರಿಸಿದ್ದು, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದನು. ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ನೀಡಿ ರೂಮ್ ಪಡೆದು ಅತ್ಯಾಚಾರ ಎಸಗಿದ್ದನು. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದನು. ನಂತರ ಡಿಲೀಟ್ ಮಾಡಬೇಕಾದರೆ ಹಣ ನೀಡಬೇಕೆಂದು ಬೆದರಿಕೆ ಹಾಕಿ ಆಕೆಯಿಂದ ಹಣ ಪಡೆದುಕೊಂಡಿದ್ದನು. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್‌ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದನು ಎಂದು ದೂರಲಾಗಿತ್ತು. ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್‌ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್‌ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಸಗಿರುವ ಕಾರಣ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಬಾಲಕಿಯ ಅತ್ಯಾಚಾರಕ್ಕೆ 20ವರ್ಷಗಳ ಕಠಿಣ ಸಜೆ 20ಸಾವಿರ ರೂ. ದಂಡ, ಬೆದರಿಕೆಯೊಡ್ಡಿದಕ್ಕೆ ಒಂದು ವರ್ಷ ಸಜೆ ಒಂದು ಸಾವಿರ ರೂ. ದಂಡ, ಲೈಂಗಿಕ ಹಲ್ಲೆಗಾಗಿ ಒಂದು ವರ್ಷ ಸಜೆ ಮತ್ತು ಒಂದು ಸಾವಿರ ರೂ. ದಂಡ, ಅರೆನಗ್ನ ವಿಡಿಯೋ ಚಿತ್ರೀಕರಣ ಮಾಡಿರುವುದಕ್ಕೆ 5ವರ್ಷ ಸಜೆ, 5000ರೂ. ದಂಡ, ವಿಡಿಯೋವನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿ ಇಟ್ಟಿದ್ದಕ್ಕೆ 5000ರೂ. ದಂಡ, ಐಟಿ ಕಾಯಿದೆಯಡಿ 2 ವರ್ಷ ಸಜೆ 2000ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರು.

    Post Views: 268

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.