Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ವಿಶಾಲ ಗಾಣಿಗ ಕೊಲೆ ಪ್ರಕರಣದ 4 ನೇ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ ವಿಶಾಲ ಗಾಣಿಗ ಕೊಲೆ ಪ್ರಕರಣದ 4 ನೇ ಆರೋಪಿ ಅರೆಸ್ಟ್

    February 3, 2024
    Share

    ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್‌ನಲ್ಲಿ  ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಉತ್ತರ ಪ್ರದೇಶದ ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

    ಉತ್ತರ ಪ್ರದೇಶದ ಗೋರಖ್ ಪುರ ನಿವಾಸಿ ಧರ್ಮೇಂದ್ರ ಕುಮಾರ್ ಸುಹಾನಿ (40) ಬಂಧಿತ ಆರೋಪಿ. ಈ ಹಿಂದೆ ಪ್ರಕರಣದ ಆರೋಪಿಗಳಾದ ವಿಶಾಲ ಗಾಣಿಗರ ಪತಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್‌ಗಳಾದ ಗೋರಖ್ ಪುರದ ಸ್ವಾಮಿನಾಥನ್ ನಿಶಾದ್ ಮತ್ತು ರೋಹಿತ್ ರಾಣಾ ಪ್ರತಾಪ್ ನಿಶಾದ್ ಅವರನ್ನು ಬಂಧಿಸಲಾಗಿತ್ತು. ಧರ್ಮೇಂದ್ರ ಕುಮಾರ್, ಪ್ರಕರಣದ ಪ್ರಮುಖ ಆರೋಪಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ್ದನು. ಈತನು ಪ್ರಕರಣ ದಾಖಲಾದ ವಿಚಾರ ತಿಳಿದು, 3 ವರ್ಷಗಳಿಂದ ದುಬೈಯಲ್ಲಿ ತಲೆಮರೆಸಿಕೊಂಡಿದ್ದನು. ಧರ್ಮೇಂದ್ರ ಫೆ.2ರಂದು ದುಬೈಯಿಂದ ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಭಾರತಕ್ಕೆ ಬರುತ್ತಿರುವ ಮಾಹಿತಿ ಪಡೆದ ಬ್ರಹ್ಮಾವರ ಠಾಣಾ ಎಸ್ಸೈ ಮಧು ಬಿ.ಇ. ಹಾಗೂ ಎಎಸೈ ಶಾಂತರಾಜ್, ಸಿಬ್ಬಂದಿ ಸುರೇಶ ಬಾಬು ತಂಡವು ವಿಮಾನ ನಿಲ್ದಾಣದಲ್ಲಿ ಆರೋಪಿ ಧರ್ಮೇಂದ್ರನನ್ನು ವಶಕ್ಕೆ ಪಡೆದುಕೊಂಡಿತು. ಉಡುಪಿಗೆ ಕರೆ ತಂದ ಪೊಲೀಸ್ ತಂಡವು ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತು. ಹೆಚ್ಚಿನ ತನಿಖೆಗಾಗಿ ಪೊಲೀಸರು ಆರೋಪಿಯನ್ನು ಸೋಮವಾರ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2021ರ ಜು.12ರಂದು ಫ್ಲ್ಯಾಟ್‌ನಲ್ಲಿ ಒಬ್ಬಂಟಿಯಾಗಿದ್ದ ವಿಶಾಲ ಗಾಣಿಗರನ್ನು ಭೀಕರವಾಗಿ ಕೊಲೆ ಮಾಡಿ, ಚಿನ್ನಾಭರಣಗಳನ್ನು ಸುಲಿಗೆ ಮಾಡಲಾಗಿತ್ತು. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಪೊಲೀಸರು, ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ ಸೂತ್ರದಾರ ಪತಿ ಹಾಗೂ ಸುಪಾರಿ ಕಿಲ್ಲರ್‌ಗಳನ್ನು ಬಂಧಿಸಿದ್ದರು.

    Post Views: 245

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.