Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹರೇಕಳಕ್ಕೆ ಪದವಿಪೂರ್ವ ಕಾಲೇಜು: ಹಾಜಬ್ಬ ಪ್ರಯತ್ನಕ್ಕೆ ಫಲ
    ಇತ್ತೀಚಿನ ಸುದ್ದಿ

    ಹರೇಕಳಕ್ಕೆ ಪದವಿಪೂರ್ವ ಕಾಲೇಜು: ಹಾಜಬ್ಬ ಪ್ರಯತ್ನಕ್ಕೆ ಫಲ

    February 5, 2024
    Share

    ಉಳ್ಳಾಲ: “ಅಕ್ಷರ ಸಂತ” ಎಂದು ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತ ಕಿತ್ತಳೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಅವರ ಮನವಿಗೆ ಮೇರೆಗೆ, ಉಳ್ಳಾಲ ತಾಲ್ಲೂಕಿನ ಹರೇಕಳದಲ್ಲಿ ಅವರು ನಿರ್ಮಿಸಿದ್ದ ಪ್ರೌಢಶಾಲೆಯು, ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪ.ಪೂ. ಕಾಲೇಜು ಸ್ಥಳೀಯ ವಿದ್ಯಾರ್ಥಿಗಳಿಗೆ ಮಂಜೂರಾಗಲಿದೆ.

    ಹರೇಕಳ ಪರಿಸರದಲ್ಲಿ ಪದವಿಪೂರ್ವ ಕಾಲೇಜು ಇಲ್ಲದ ಕಾರಣ ಇಲ್ಲಿನ ವಿದ್ಯಾರ್ಥಿಗಳು ಪದವಿಪೂರ್ವ ವಿದ್ಯಾಭ್ಯಾಸಕ್ಕಾಗಿ ದೂರದ ಪಟ್ಟಣದ ಕಾಲೇಜುಗಳಿಗೆ ಹೋಗಬೇಕಾದ ಸ್ಥಿತಿ ಇದ್ದು, ಇದಕ್ಕಾಗಿ ಪ್ರೌಢ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕು ಎಂದು ಹರೇಕಳ ಹಾಜಬ್ಬ ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರು.ಇದೀಗ ರಾಜ್ಯಪಾಲರ ಆದೇಶದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿ ಪೂರ್ವ ಶಿಕ್ಷಣ) ಅಧೀನ ಕಾರ್ಯದರ್ಶಿ ಪದ್ಮಿನಿ ರಾವ್ ಹೊರಡಿಸಿರುವ ಆದೇಶ ಪತ್ರ ಹಾಜಬ್ಬ ಅವರ ಕೈ ಸೇರಿದೆ.ಇಲಾಖೆಯಲ್ಲಿ ಈಗಾಗಲೇ ಮಂಜೂರಾಗಿರುವ ಹುದ್ದೆಗಳನ್ನು ಬಳಸಿಕೊಂಡು ಹಾಗೂ ಲಭ್ಯ ಸಂಪನ್ಮೂಲಗಳಿಂದ ವೆಚ್ಚವನ್ನು ಭರಿಸುವ ಷರತ್ತಿಗೆ ಒಳಪಟ್ಟು ಪಿ.ಯು. ಕಾಲೇಜು ಆರಂಭಿಸುವುದಕ್ಕೆ ಮಂಜೂರಾತಿ ನೀಡಿದೆ.ಹರೇಕಳ ಹಾಜಬ್ಬ ಮಂಗಳೂರಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡಿ ಹಣ ಉಳಿಸಿ ತಮ್ಮ ಊರಿನಲ್ಲಿ ಶಾಲೆಯನ್ನು ಕಟ್ಟಿಸಿದ್ದರು. ಅವರ ಶಿಕ್ಷಣ ಪ್ರೀತಿಯನ್ನು ಗುರುತಿಸಿದ ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

    Post Views: 262

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.