Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರೈಲು ಡಿಕ್ಕಿಗೆ ಕೂಲಿ ಕಾರ್ಮಿಕ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ರೈಲು ಡಿಕ್ಕಿಗೆ ಕೂಲಿ ಕಾರ್ಮಿಕ ಮೃತ್ಯು

    February 5, 2024
    Share

    ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ  ಸೋಮವಾರ ಬೆಳಿಗ್ಗೆ  ನಡೆದಿದೆ.

    ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.
    ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಅವರು ಇಂದು ಬೆಳಿಗ್ಗೆ ಸುಮಾರು 7.30 ಗಂಟೆ ಹೊತ್ತಿಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.
    ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
    ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
    ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ‌ಆಗಮಿಸಿ,ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
    ಘಟನೆಯ ಮಾಹಿತಿ ಸಿಕ್ಕಿದಂತೆ ಹೊಯ್ಸಳ 112 ವಾಹನದ ಜೊತೆ ಎಎಸ್ ಐ ದೇವಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    Post Views: 192

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.