Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫೆ.12ರಿಂದ 23ರವರೆಗೆ ‘ರಾಜ್ಯ ಬಜೆಟ್’ ಅಧಿವೇಶನ, ಫೆ.16ರಂದು ‘ಸಿಎಂ ಬಜೆಟ್ ಮಂಡನೆ’ – ಸ್ಪೀಕರ್ ಯು.ಟಿ ಖಾದರ್
    ಇತ್ತೀಚಿನ ಸುದ್ದಿ

    ಫೆ.12ರಿಂದ 23ರವರೆಗೆ ‘ರಾಜ್ಯ ಬಜೆಟ್’ ಅಧಿವೇಶನ, ಫೆ.16ರಂದು ‘ಸಿಎಂ ಬಜೆಟ್ ಮಂಡನೆ’ – ಸ್ಪೀಕರ್ ಯು.ಟಿ ಖಾದರ್

    February 5, 2024
    Share

    ಬೆಂಗಳೂರು : ವಿಧಾನಮಂಡಲದ ಅಧಿವೇಶನ ಇದೇ ಫೆ.12ರಂದು ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರು ತಿಳಿಸಿದರು.

    ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

    ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್‌ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಅವರು ವಿವರಿಸಿದ ಸ್ಪೀಕರ್‌ ಖಾದರ್‌ ಅವರು ಈ ತರಬೇತಿ ಕಾರ್ಯಾಗಾರಕ್ಕೆ ವಿಧಾನಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ ಎಂದರು.

    ಫೆ.16ರಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ

    ಫೆ.16ರಂದು ಸಿಎಂ ಅವರು ಬಜೆಟ್‌ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್‌ ಖಾದರ್‌ ಅವರು ವಿವರಿಸಿದರು.

    12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದರು.

    ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದರು.

    ಶಾಸಕರು,ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣದಲ್ಲಿದ್ದ ಕ್ಯಾಂಟೀನ್‌ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೇ ಮಹಡಿಯ ಪೂರ್ವಭಾಗದಲ್ಲಿರುವ ಸೆಂಟ್ರಲ್‌ ಹಾಲ್‌ನಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು,ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು,ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್‌ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂತರ ಇ-ಮೇಲ್‌ ಕಳುಹಿಸಲಾಗುವುದು.ಅಲ್ಲದೇ ಸಚಿವಾಲಯದ ವೆಬ್‌ಸೈಟಿನಲ್ಲಿಯೂ ದೊರೆಯುತ್ತದೆ ಎಂದರು.

    ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟಲ್‌ಗಳ ವೈವಿಧ್ಯಮಯವಾದ ರುಚೀಕರ,ಆರೋಗ್ಯಪೂರ್ಣವಾದ ಭೋಜನದ ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂದು ಸ್ಪೀಕರ್‌ ಖಾದರ್‌ ಅವರು ವಿವರಿಸಿದರು. ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.
    ಮಾಧ್ಯಮದವರು ಅತ್ಯುತ್ತಮ ವಿಷಯಗಳ ಕುರಿತು ಬೆಳಕು ಚೆಲ್ಲಿ ಸದನದ ಕಲಾಪಕ್ಕೆ ಮೆರಗು ನೀಡಬೇಕು ಎಂದು ಅವರು ಹೇಳಿದರು.

    Post Views: 174

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.