Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನಿಗೆ 15 ದಿನ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನಿಗೆ 15 ದಿನ ನ್ಯಾಯಾಂಗ ಬಂಧನ

    June 29, 2022
    Share

    ಉಡುಪಿ: ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ.

    ಜೂನ್ 26ರಂದು ವರುಣ್ ಭಯದ ಧ್ವನಿಯಲ್ಲಿ ತನ್ನ ಪೋಷಕರಿಗೆ ಕರೆ ಮಾಡಿ ತನ್ನನ್ನು ಯಾರೋ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿಸಿದ್ದ. ಅಪಹರಣಕಾರರು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಆತಂಕಗೊಂಡು ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಅಪಹರಣ ಕುರಿತಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ನಡುವೆ ವರುಣ್ ಆಗಾಗ್ಗೆ ತನ್ನ ಪೋಷಕರೊಂದಿಗೆ ವಾಟ್ಸಾಪ್ ಚಾಟ್‌ಗಳ ಮೂಲಕ ಸಂಪರ್ಕದಲ್ಲಿರುತ್ತಿದ್ದ. ಅವನ ತಾಯಿ ಕೊನೆಗೆ ಫೋನ್ ಕರೆಯಲ್ಲಿ ಮಾತನಾಡಲು ಅವನನ್ನು ಒಪ್ಪಿಸಿದರು. ವರುಣ್ ತನ್ನ ಪೋಷಕರಿಗೆ ಕರೆ ಮಾಡಿದಾಗ, ಎಚ್ಚೆತ್ತ ಪೊಲೀಸರು ಫೋನ್ ಕರೆ ಸ್ಥಳವನ್ನು ಟ್ರ್ಯಾಕ್ ಮಾಡಿದ್ದಾರೆ. ಯುವಕನ ಮೊಬೈಲ್ ಲೊಕೇಷನ್ ಪತ್ತೆ ಮಾಡುವಾಗ ಅದು ಗೋವಾದಲ್ಲಿರುವುದು ಗೊತ್ತಾಗಿದೆ ಕೂಡಲೇ ಗೋವಾಕ್ಕೆ ಇಬ್ಬರು ಸಿಬ್ಬಂದಿಗಳನ್ನು ಕಳುಹಿಸಿಕೊಡಲಾಯಿತು, ಈ ವೇಳೆ ಮೊಬೈಲ್ ಲೊಕೇಷನ್ ಪರಿಶೀಸಿ ಆ ಸ್ಥಳಕ್ಕೆ ಹೋದಾಗ ಪೊಲೀಸರಿಗೆ ಶಾಕ್ ಆಗಿತ್ತು, ಆದರೆ ಅಪಹರಣಕ್ಕೊಳಗಾಗಿದ್ದೇನೆ ಎಂದಿದ್ದ ಯುವಕ ತನ್ನ ಗೆಳೆಯರೊಂದಿಗೆ ಗೋವಾದ ಕ್ಯಾಸಿನೋ ಒಂದರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ.ಬಳಿಕ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಿಸಿದಾಗ ತಾನು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ, ಸರಿಯಾದ ಕೆಲಸವಿಲ್ಲದೆ ತನ್ನ ಗೆಳೆಯರೊಂದಿಗೆ ಮೋಜು ಮಸ್ತಿ ಮಾಡಲು ಕೈಯಲ್ಲಿ ಹಣವಿಲ್ಲದಿದ್ದಾಗ ತಲೆಗೆ ಬಂದಿದ್ದು ತನ್ನ ಪೋಷಕರ ಬಳಿ ಇರುವ ಹಣವನ್ನು ಹೇಗಾದರೂ ಮಾಡಿ ಲಪಟಾಯಿಸುವ ಉದ್ದೇಶದಿಂದ ನಾನು ಅಪಹರಣದ ನಾಟಕವಾಡಿ ನನ್ನದೇ ಮೊಬೈಲ್ ನಿಂದ ತಾಯಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಿಸಿದ್ದಾರೆ ಅವರು ಐದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಅಲ್ಲದೆ ಹಣ ನೀಡದಿದ್ದಲ್ಲಿ ನನ್ನನ್ನು ಕೊಲೆ ಮಾಡುತ್ತಾರೆ ಎಂದು ಅಳುತ್ತಾ ಹೇಳಿದೆ ಎಂದು ತನ್ನ ತಪ್ಪನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.ಪೋಷಕರ ಹಣ ಎಗರಿಸುವ ಉದ್ದೇಶ ಹಾಗೂ ಪೊಲೀಸರ ಸಮಯವನ್ನು ವ್ಯರ್ಥಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದು ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 214

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.