Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಹಿ.ಜಾ.ವೇ.ಮುಖಂಡ ದಿನೇಶ್ ಪಂಜಿಗ ಹಾಗೂ ಇನ್ನಿಬ್ಬರಿಗೆ ಗಡಿಪಾರು ನೋಟಿಸ್‌;ಎಸಿ ಆದೇಶಕ್ಕೆ ಜಿಲ್ಲಾ ನ್ಯಾಯಾಲಯ ತಡೆ
    ಇತ್ತೀಚಿನ ಸುದ್ದಿ

    ಪುತ್ತೂರು: ಹಿ.ಜಾ.ವೇ.ಮುಖಂಡ ದಿನೇಶ್ ಪಂಜಿಗ ಹಾಗೂ ಇನ್ನಿಬ್ಬರಿಗೆ ಗಡಿಪಾರು ನೋಟಿಸ್‌;ಎಸಿ ಆದೇಶಕ್ಕೆ ಜಿಲ್ಲಾ ನ್ಯಾಯಾಲಯ ತಡೆ

    February 10, 2024
    Share

    ಪುತ್ತೂರು: ಹಿಂದು ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಗಡಿಪಾರು ಕುರಿತು ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್‌ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ ನೀಡಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಬೆಳಾಲು ನಿವಾಸಿ ಯಶೋಧರ ಎಂಬವರಿಗೆ, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಉಪವಿಭಾಗೀಯ ದಂಡಾಧಿಕಾರಿ ನೋಟೀಸ್ ಜಾರಿ ಮಾಡಿದ್ದರು.ನೀವು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ಈ ಕುರಿತು ವಾದಿಸಬಹುದು ಎಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್‌ನಲ್ಲಿ ತಿಳಿಸಲಾಗಿತ್ತು.ನೊಟೀಸ್ ಜಾರಿ ಮಾಡಿರುವ ಉಪವಿಭಾಗೀಯ ಕಾರ್ಯನಿರ್ವಾಹಕ ದಂಡಾಧಿಕಾರಿಯವರ ಕ್ರಮವನ್ನು ಪ್ರಶ್ನಿಸಿ ಆಪಾದಿತರು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿ, ಈ ನೋಟೀಸ್ ಜಾರಿ ಮಾಡಿದ ಕ್ರಮ ಸರಿಯಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದಿದ್ದರು. ಅವರ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ಕುರಿತ ನೋಟೀಸ್‌ಗೆ ತಡೆ ನೀಡಿದ್ದಾರೆ.ಆರೋಪಿಗಳ ವಿರುದ್ಧ ದಾಖಲಿಸಿದ ಎಲ್ಲಾ ಕಡತವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ.

    Post Views: 176

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.