Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವಿಚಕ್ರ ವಾಹನದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲೈಟ್ ಧರಿಸುವುದು ಕಡ್ಡಾಯ
    ಇತ್ತೀಚಿನ ಸುದ್ದಿ

    ದ್ವಿಚಕ್ರ ವಾಹನದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲೈಟ್ ಧರಿಸುವುದು ಕಡ್ಡಾಯ

    February 11, 2024
    Share

    ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ. ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಬರುವ ಪೋಷಕರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ. ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲೈಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್ ಮಾಡಲು ಟ್ರಾಫಿಕ್ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    Post Views: 255

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.