Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಹಾವಳಿ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ
    ಇತ್ತೀಚಿನ ಸುದ್ದಿ

    ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಹಾವಳಿ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

    February 22, 2024
    Share

    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

    ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿತಪ್ಪುತ್ತಿದ್ದಾರೆ.

    ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ , ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.

    Post Views: 183

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.