Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಸರಕಾರಿ ಬಸ್ ಕಂಡಕ್ಟರ್‌ಗೆ ಕಾರಾಗೃಹ ಶಿಕ್ಷೆ- ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಸರಕಾರಿ ಬಸ್ ಕಂಡಕ್ಟರ್‌ಗೆ ಕಾರಾಗೃಹ ಶಿಕ್ಷೆ- ದಂಡ

    February 24, 2024
    Share

    ಮಂಗಳೂರು: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೊಕ್ಸೊ)‌ ಸರಕಾರಿ ಬಸ್ ಕಂಡೆಕ್ಟರ್ ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ನಿವಾಸಿ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿ. 2023ರ ಮಾರ್ಚ್‌ನಲ್ಲಿ ಬಾಲಕಿ ಶಾಲೆಯಿಂದ ಬಿ.ಸಿ ರೋಡ್‌ನಲ್ಲಿರುವ ತನ್ನ ಮನೆಗೆ ಮರಳಲು ಕಲ್ಲಡ್ಕದಲ್ಲಿ ಸರಕಾರಿ ಬಸ್ ಹತ್ತಿದ್ದಾಳೆ. ಈ ವೇಳೆ ಬಸ್‌ನಲ್ಲಿ 4-5 ಮಂದಿ ಮಾತ್ರ ಪ್ರಯಾಣಿಕರಿದ್ದರು. ಮುಂದಿನ ನಿಲ್ದಾಣದಲ್ಲಿ ಅವರೆಲ್ಲಾ ಬಸ್‌ನಿಂದ ಇಳಿದಿದ್ದಾರೆ. ಆಗ ಆರೋಪಿ ಕಂಡೆಕ್ಟ‌ರ್ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತಾನು ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಬಾಲಕಿ ಹೇಳಿದರೂ ಆರೋಪಿ ಅಸಭ್ಯತನ ಮುಂದುವರಿಸಿದ್ದ. ಇದರಿಂದ ನೊಂದ ಬಾಲಕಿ ಬಸ್‌ನ ಸಂಖ್ಯೆ ಸಮೇತ ಮನೆಗೆ ತೆರಳಿ ತಾಯಿ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ತಾಯಿ ಮತ್ತು ಬಾಲಕಿಯು ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಕಂಡೆಕ್ಟರ್‌ನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾದೆ. ಈ ಬಗ್ಗೆ ಇನ್‌ಸ್ಪೆಕ್ಟರ್ ನಂದಿನಿ ಎಸ್.ಶೆಟ್ಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೊಕ್ಸೊ)ದ ನ್ಯಾಯಾಧೀಶೆ ಮಂಜುಳಾ ಇಟ್ಟಿ ವಾದ – ವಿವಾದವನ್ನು ಆಲಿಸಿ ಶುಕ್ರವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಕಲಂ 509ರಡಿ ಆರೋಪಿಗೆ 1 ವರ್ಷ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ ಒಂದು ತಿಂಗಳು ಸಜೆ, ಪೊಕ್ಸೊ ಕಾಯ್ದೆಯ ಕಲಂ 12ರಡಿ 2 ವರ್ಷ ಕಠಿಣ ಸಜೆ ಮತ್ತು 10,000 ರೂ.ದಂಡ, ದಂಡ ಪಾವತಿಸದಿದ್ದರೆ ಮತ್ತೆ 2 ತಿಂಗಳು ಸಜೆ ವಿಧಿಸಿದ್ದಾರೆ. ಅಲ್ಲದೆ ಸಂತ್ರಸ್ತೆಗೆ 10,000 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ.

    Post Views: 217

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.