Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ : ಅನೈತಿಕ ಪೊಲೀಸ್ ಗಿರಿ – ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಕಡಬ : ಅನೈತಿಕ ಪೊಲೀಸ್ ಗಿರಿ – ನಾಲ್ವರ ಬಂಧನ

    February 24, 2024
    Share

    ಕಡಬ : ಮನೆ ಎದುರು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿರುವ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಡಬದ ಮರ್ಧಾಳ ಶಿವಾಜಿನಗರ ನಿವಾಸಿ ದಿ. ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ತನ್ನ ಮನೆಯಲ್ಲಿದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ವೇಳೆಗ ಮನೆಯ ಹತ್ತಿರಕ್ಕೆ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ ನ ಮನೆ ಯಾವುದು ಎಂದು ಕೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ಇದು ರಿಯಾಝ್ ನ ಮನೆ ಅಲ್ಲ. ನೀವು ಇಲ್ಲಿಂದ ತೆರಳಿ ಎಂದು ಹೇಳಿದ್ದು, ಆ ಸಮಯದಲ್ಲಿ ಅಪರಿಚಿತ ಮಹಿಳೆಯು ಅಲ್ಲೇ ಮನೆ ಮುಂಭಾಗದಲ್ಲಿ ಅಳುತ್ತಾ ನಿಂತಿದ್ದರು ಎನ್ನಲಾಗಿದೆ.

    ಆ ಸಂದರ್ಭದಲ್ಲಿ ಫಯಾಝ್ ನ ತಾಯಿ ಅಪರಿಚಿತ ಮಹಿಳೆಯನ್ನು ಸಮಾಧಾನ ಮಾಡಿ ನಂತರ ಮನೆ ಪಕ್ಕದ ಇಬ್ರಾಹಿಂ ಎಂಬ ಹುಡುಗನ ಜೊತೆ ಈ ಮಹಿಳೆಯನ್ನು ಮರ್ಧಾಳ ಬಸ್ಸು ನಿಲ್ದಾಣದ ಹತ್ತಿರ ಬಿಟ್ಟು ಬಾ ಎಂದು ಹೇಳಿದಂತೆ ಆ ಹೆಂಗಸನ್ನು ಸ್ಕೂಟರ್‌ನಲ್ಲಿ ಇಬ್ರಾಹಿಂ ಎಂಬಾತನು ಕುಳ್ಳಿರಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

    ಅದೇ ಸಮಯಕ್ಕೆ ಆರೋಪಿಗಳಾದ ಜಿನಿತ್‌ ಕುಮಾರ್, ಉಮೇಶ್, ವಿನುತ್‌, ನಾಗೇಶ್ ಹಾಗೂ ಶ್ರೀಕರ ಸೇರಿದಂತೆ ಇತರ 10 ರಿಂದ 15 ಜನರು ಬಂದು ಫಯಾಝ್ ನನ್ನು ಕರೆದು ಸ್ಕೂಟರ್‌ನಲ್ಲಿ ಹೋದ ಮಹಿಳೆಯ ಬಗ್ಗೆ ವಿಚಾರಿಸಿದ್ದು, ಈ ವೇಳೆ ನೀಡಿದ ಉತ್ತರದಿಂದ ಅಸಮಾಧಾನಿತರಾದ ತಂಡ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ ಹಿಂದೂ ಮಹಿಳೆಯರನ್ನು ಮನೆಗೆ ಬರಮಾಡಿಕೊಂಡು ಅನೈತಿಕವಾಗಿ ಅವರನ್ನು ಹಾಳು ಮಾಡುತ್ತಿದ್ದೀಯಾ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಈ ವೇಳೆ ಸ್ಥಳದಲ್ಲಿದ್ದ ಫಯಾಝ್ ನ ತಾಯಿ ಸಫಿಯಾ ಅಡ್ಡ ಬಂದಿದ್ದು, ಅವರಿಗೂ ಹಲ್ಲೆ‌ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ಫಯಾಝ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 220

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.