Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಪ್ರತಿ ಭಾನುವಾರವೂ ‘ಸಬ್ ರಿಜಿಸ್ಟ್ರಾರ್’ ಕಚೇರಿ ಓಪನ್ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
    ಇತ್ತೀಚಿನ ಸುದ್ದಿ

    ಇನ್ಮುಂದೆ ಪ್ರತಿ ಭಾನುವಾರವೂ ‘ಸಬ್ ರಿಜಿಸ್ಟ್ರಾರ್’ ಕಚೇರಿ ಓಪನ್ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    March 14, 2024
    Share

    ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಛೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಛೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಛೇರಿಯು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.

    ಇದೇ ರೀತಿ ಪ್ರಾಯೋಗಿಕವಾಗಿ ಏಪ್ರಿಲ್ ಮಾಹೆಯಿಂದ ರಾಜ್ಯದ ಬೆಂಗಳೂರು ನಗರ ನೋಂದಣಿ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯು ಸೇರಿದಂತೆ ರಾಜ್ಯದ ಇತರ ಎಲ್ಲಾ ನೋಂದಣಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಉಪ ನೋಂದಣಿ ಕಛೇರಿಗಳಲ್ಲಿ ಒಂದು ಉಪ ನೋಂದಣಿ ಕಛೇರಿಯನ್ನು ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಸದರಿ ಕಛೇರಿಗಳಿಗೆ ಆ ವಾರದ ಮಂಗಳವಾರ ದಿನದಂದು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.

    ನೋಂದಣಿ ಜಿಲ್ಲೆಯ ಉಪ ನೋಂದಣಿ ಕಛೇರಿಗಳ ಪೈಕಿ ಭಾನುವಾರದಂದು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಕಾರ್ಯನಿರ್ವಹಿಸುವ ಉಪ ನೋಂದಣಿ ಕಛೇರಿಯ ವಿವರಗಳನ್ನು ಈ ಕೂಡಲೇ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಸಾರ್ವಜನಿಕರ ಮಾಹಿತಿಗಾಗಿ ಅವರ ಕಛೇರಿಯ ಅಧಿಕೃತ ಜಾಲತಾಣದಲ್ಲಿ ಹಾಗೂ ಕಾವೇರಿ-2 ಜಾಲತಾಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವುದು. ಅಲ್ಲದೆ ಭಾನುವಾರದಂದು ಕಾರ್ಯನಿರ್ವಹಿಸುವ ಉಪ ನೋಂದಣಿ ಕಛೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಅನುಕೂಲಕರ ಸಮಯವನ್ನು ನಿಗದಿಪಡಿಸಿಕೊಳ್ಳಲು ಕಾವೇರಿ-2 ತಂತ್ರಾಂಶದಲ್ಲಿ ಸೂಕ್ತ ಪಾರದರ್ಶಕ ಅವಕಾಶಗಳನ್ನು ಕಲ್ಪಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಅವಶ್ಯಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

    Post Views: 255

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.