ಕಾಸರಗೋಡು: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ . ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ ಒಡೆಯಂಚಾಲ್ ಚೆರುಪ್ಪುಯದಲ್ಲಿ ಗುಡ್ಡಕುಸಿತ ಉಂಟಾಗಿದೆ. ಚೆರುಪ್ಪುಯ ಒಡೆಯಂಚಾಲ್ ನಲ್ಲಿ ರಸ್ತೆ ಮೇಲೆ ಗುಡ್ಡ ಜರಿದು ಬಿದ್ದಿದ್ದು , ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮಣ್ಣು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದ ಘಟನೆಯೂ ನಡೆದಿದೆ. ಮನೆಗೆ ಭಾಗಶಃ ಹಾನಿ ಉಂಟಾಗಿದೆ . ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಹಾನಿಗೊಂಡಿದೆ.