Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು
    ಇತ್ತೀಚಿನ ಸುದ್ದಿ

    ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು

    March 15, 2024
    Share

    ಮೂಡುಬಿದ್ರೆ: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ.

    ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ ಶಿಕ್ಷಕ ಗುರುವ ಮೊಗೇರಾ ಅವರಿಂದ ತೊಂದರೆಗಳಾಗುತ್ತಿರುವ ಕುರಿತು ಹೇಳಿಕೊಂಡಿದ್ದರು. ಪಠ್ಯ ಸಂಬಂಧಿತ ವಿಷಯಕ್ಕೆ ಅಥವಾ ರಜಾ ಅರ್ಜಿ ಹಿಡಿದುಕೊಂಡು ಅವರ ಬಳಿಗೆ ಹೋದಾಗ, ಇಬ್ಬರು ವಿದ್ಯಾರ್ಥಿನಿಯರಿದ್ದರೆ ಒಬ್ಬರನ್ನು ಬೈದು ಹೊರಗೆ ಕಳುಹಿಸಿ ಒಬ್ಬಳನ್ನೇ ಕೊಠಡಿಯಲ್ಲಿ ಇರುವಂತೆ ಮಾಡಿ, ಅಸಭ್ಯವಾಗಿ ವರ್ತಿಸುವುದು, ಬ್ಯಾಡ್‌ ಟಚ್‌ ಮಾಡುವುದು ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಅಧ್ಯಾಪಕ ಗುರುವ ಮೊಗೇರಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಲೆಯ ಮುಖ್ಯ ಶಿಕ್ಷಕರು ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

    Post Views: 283

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.