Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:‌ 19 ರೌಡಿಶೀಟರ್‌ಗಳಿಗೆ ಗಡಿಪಾರು ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು:‌ 19 ರೌಡಿಶೀಟರ್‌ಗಳಿಗೆ ಗಡಿಪಾರು ಆದೇಶ

    March 20, 2024
    Share

    ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ 19 ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ.

    ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೋಂದೆಲ್‌ನ ಜಯೇಶ್ ಯಾನೆ ಸಾಚು, ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ, ಅಶೋಕ ನಗರದ ಅಝೀಝ್, ಕಾವೂರಿನ ಇಶಾಮ್, ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ, ಕೈಕಂಬ-ಗಣೇಶ್‌ಪುರದ ದೀಕ್ಷಿತ್ ಪೂಜಾರಿ, ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ, ಬೊಂಡಂತಿಲದ ಕಿಶೋರ್ ಸನಿಲ್, ಉಳ್ಳಾಲ ಕೋಡಿಯ ಹಸೈನಾರ್ ಅಲಿ, ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್, ಬೋಳೂರಿನ ರೋಶನ್ ಕಿಣಿ, ಕಸಬಾ ಬೆಂಗರೆಯ ಅಹ್ಮದ್ ಸಿನಾನ್, ಜಪ್ಪಿನಮೊಗರಿನ ದಿತೇಶ್ ಕುಮಾರ್, ಬಜಾಲ್ ಕುತ್ತಡ್ಕದ ಗುರುಪ್ರಸಾದ್, ಭರತ್ ಪೂಜಾರಿ, ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.

    ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಈ ಕ್ರಮ ಜರಗಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದ್ದರೆ, ಈ ತಿಂಗಳ ಆರಂಭದಲ್ಲಿ 7 ಜನರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆರೋಪಿಗಳನ್ನು ವಿವಿಧ ಜಿಲ್ಲೆಗಳಿಗೆ ಸ್ಥಳಾಂತರಿಸಲಾಗಿದೆ. ಶಾಂತಿಯುತ ಚುನಾವಣೆಯನ್ನು ನಡೆಸುವ ಸಲುವಾಗಿ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ. ಅದಲ್ಲದೆ 367 ಮಂದಿಯ ವಿರುದ್ಧ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

    Post Views: 287

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.