Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿಗೆ ಆಗಮಿಸಿದ ‘ವಿಲಾಸಿ ಹಡಗು..’!
    ಇತ್ತೀಚಿನ ಸುದ್ದಿ

    ಮಂಗಳೂರಿಗೆ ಆಗಮಿಸಿದ ‘ವಿಲಾಸಿ ಹಡಗು..’!

    April 1, 2024
    Share

    ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್ ಪ್ರವಾಸಿ ವಿಲಾಸಿ ಹಡಗು ‘ಸೆವೆನ್ ಸೀಸ್ ಮರೈನರ್’ನ್ನು ರವಿವಾರ(ಮಾ.31) ಸ್ವಾಗತಿಸಿದೆ.

    ಸೆವೆನ್ ಸೀಸ್ ಮರೈನರ್ ಒಟ್ಟು 610 ಪ್ರಯಾಣಿಕರು ಮತ್ತು 440 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿದ್ದು, ಪ್ರವಾಸಿಗರಿಗೆ ನವ ಮಂಗಳೂರು ಬಂದರಿನ ಹಡಗು ತಂಗುದಾಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.  ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ವೆಂಕಟರಮಣ ಅಕ್ಕರಾಜು, ಉಪಾಧ್ಯಕ್ಷ ಕೆ ಜಿ ನಾಥ್‌ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದು ವಿದೇಶಿಗರನ್ನು ಸ್ವಾಗತಿಸಿದರು.

    ಪ್ರವಾಸಿಗರ ಆಕರ್ಷಣೆಯಾದ ಸೆಲ್ಫಿ ಸ್ಟ್ಯಾಂಡ್ 

    ಪ್ರವಾಸಿಗರು ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯ, ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳಲು ಅನುಕೂಲವಾಗುವಂತೆ ಬಸ್ ಮತ್ತು ಟ್ಯಾಕ್ಸಿಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಸಚಿವಾಲಯವು ಸ್ಥಾಪಿಸಿದ ಕೇಂದ್ರದಲ್ಲಿ ಪ್ರಯಾಣಿಕರು ಧ್ಯಾನದ ಅನುಭವ ಪಡೆದುಕೊಂಡರು. ತುಳುನಾಡಿನ ಯಕ್ಷಗಾನ ಕಲಾ ಪ್ರಕಾರವನ್ನು ಪ್ರದರ್ಶಿಸುವ ವಿಶಿಷ್ಟ ಸೆಲ್ಫಿ ಸ್ಟ್ಯಾಂಡ್ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿತ್ತು.  ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಪ್ರವಾಸಿಗರನ್ನು ರಂಜಿಸಿದವು. ಕಾರ್ಕಳ ಗೋಮಟೇಶ್ವರ ದೇವಸ್ಥಾನ, ಮೂಡುಬಿದಿರೆಯ 1000 ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಅಚಲ್ ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸಂತ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ನಗರದ ಸಾಂಪ್ರದಾಯಿಕ ಮನೆಗಳಂತಹ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು. ನಿನ್ನೆ ಸಂಜೆ 6 ಗಂಟೆಗೆ ಈ ಪ್ರವಾಸಿ ನೌಕೆ ಇಲ್ಲಿಂದ ಮರ್ಮುಗೋವಾಕ್ಕೆ ತೆರಳಿತು.

    Post Views: 244

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.