Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ..!
    ಇತ್ತೀಚಿನ ಸುದ್ದಿ

    ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ..!

    April 1, 2024
    Share

    ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನಾಲ್ಕೂರು ಗ್ರಾಮದ ಕಪೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಹಾಗೂ ಕೊಲೆ ಮಾಡಿದ ಆರೋಪಿ ಮೃತರ ತಮ್ಮ ವಿಶ್ವನಾಥ್ (30) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 199

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.