Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೌಡಿಶೀಟರ್ ನಿವಾಸದ ಮೇಲೆ ಪೊಲೀಸರ ದಾಳಿ..!
    ಇತ್ತೀಚಿನ ಸುದ್ದಿ

    ಉಡುಪಿ: ರೌಡಿಶೀಟರ್ ನಿವಾಸದ ಮೇಲೆ ಪೊಲೀಸರ ದಾಳಿ..!

    April 3, 2024
    Share

    ಉಡುಪಿ: ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. 

    ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನೆಲೆ ಮಂಗಳವಾರ ಸಿಬ್ಬಂದಿಯವರೊಂದಿಗೆ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಕಪ್ಪು ಬಣ್ಣದ ಬಟ್ಟೆ ಪೌಚ್‌, ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದುಗುಂಡುಗಳು, ಪ್ಲಾಸ್ಟಿಕ್‌ ಪೌಚ್‌ ನಲ್ಲಿ ಇರಿಸಲಾದ ಡೆಟೋನೇಟರ್ ಗಳು, ಪ್ಲಾಸ್ಟಿಕ್‌ ಪೌಚ್‌ನಲ್ಲಿ ಇರಿಸಲಾದ ಯಾವುದೋ ಪ್ರಾಣಿಯ ಹಲ್ಲಿನ ಆಕಾರದ ಸ್ವತ್ತುಗಳು ಹಾಗೂ ಯಾವುದೋ ಪ್ರಾಣಿಯ ಉಗುರಿನ ಆಕಾರದ ಸ್ವತ್ತುಗಳು, ಪಾಸ್ಟಿಕ್ ಪೌಚ್‌ನಲ್ಲಿ ಇರಿಸಿದ ಪಿಸ್ತೂಲ್ ಗೆ ಬಳಸುವ 7.65 ಎಂಎಂ ಸಜೀವ ಗುಂಡುಗಳು, 15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್, ಹಾಕಿ ಸ್ಟಿಕ್, ಸ್ಟೀಲ್ ಚಾಕುಗಳು, ಸ್ಟೀಲಿನ ದೊಡ್ಡ ಗಾತ್ರದ ಮಚ್ಚು, ನೀಲಿ ಬಣ್ಣದ ಪ್ಲಾಸ್ಟಿಕ್‌ ಚೀಲದಲ್ಲಿದ್ದ ಒಣಗಿಸಿದ ಗಾಂಜಾ, ಸಣ್ಣ ಖಾಲಿ ಪ್ಲಾಸ್ಟಿಕ್‌ ಪೌಚ್‌ಗಳು, ಪ್ಲಾಸ್ಟಿಕ್‌ ಕ್ಯಾನ್ ನಲ್ಲಿ ತುಂಬಿಸಿಟ್ಟಿರುವ ಸ್ಪಿರೀಟ್ ಪತ್ತೆಯಾಗಿದೆ.

    ಪೊಲೀಸರು ಆತನ ಮನೆಯಲ್ಲಿ ದೊರೆತ ಎಲ್ಲಾ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುತ್ತದೆ. 

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.