Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪತ್ನಿಯನ್ನು ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪತ್ನಿಯನ್ನು ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

    April 9, 2024
    Share

    ಮಂಗಳೂರು: ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹಾಸನ ಅರಕಲಗೂಡಿನ, ಕಾವೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಕುಮಾರ್ (46) ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ಪತ್ನಿಗೆ ದಿನನಿತ್ಯ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಎಂಬ ಆರೋಪವಿತ್ತು. 2020ರ ಜು.1ರಂದು ಸಂಜೆ ಸಾಮಾನು ತರಲಿಕ್ಕಿದೆ ಎಂದು ಹೇಳಿ ಪತ್ನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ. ರಾತ್ರಿ 7ರಿಂದ 7:20ರ ಮಧ್ಯೆ ಅಂತೋನಿಕಟ್ಟೆ ಎಂಬಲ್ಲಿ ಪತ್ನಿಯ ಕುತ್ತಿಗೆ ಹಿಸುಕಿ ಕಪ್ಪು ಕಲ್ಲಿನ ಕೋರೆಯ ಮೇಲಿನಿಂದ ದೂಡಿ ಹಾಕಿ ಹತ್ಯೆ ಮಾಡಿದ್ದಮತ್ತು ಪತ್ನಿಯ ತಾಯಿಗೆ ಜೀವಬೆದರಿಕೆ ಹಾಕಿದ್ದ ಎಂದು ದೂರು ದಾಖಲಾಗಿತ್ತು. ಪ್ರಕರಣದ ಬಗ್ಗೆ ಕಾವೂರು ಠಾಣೆಯ ಇನ್ಸ್ಪೆಕ್ಟರ್ ರಾಘವ ಎಸ್. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತ ರಾಜು ಎಸ್.ವಿ. ವಿಚಾರಣೆ ನಡೆಸಿ ಆರೋಪಿಯ ಮೇಲಿನ ಆರೋಪ ಸಾಬೀತಾಗಿದ್ದರಿಂದ ಸೋಮವಾರ ಭಾರತೀಯ ದಂಡ ಸಂಹಿತೆಯ ಕಲಂ 302ರ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, ಭಾರತೀಯ ದಂಡ ಸಂಹಿತೆ ಕಲಂ 498 (ಎ)ರ ಅಪರಾಧಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ, ಭಾರತೀಯ ದಂಡ ಸಂಹಿತೆ ಕಲಂ 506ರ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಸರಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ ನಾಯಕ ಮತ್ತು ಬಿ.ಶೇಖರ ಶೆಟ್ಟಿ ಚೌಧರಿ ಮೋತಿಲಾಲ ವಾದ ಮಂಡಿಸಿದ್ದರು.

    Post Views: 232

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.