ಬೆಂಗಳೂರು : ಕಳೆದ ಒಂದು ವರ್ಷದಿಂದ ರಾಜ್ಯ ಬರದಿಂದ ಕಂಗೆಟ್ಟಿದ್ದು ರೈತರು ಸೇರಿದಂತೆ ಇಡೀ ರಾಜ್ಯದ ಜನತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ.ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ.
ಹೌದು ಕೋರ್ಟ್ನಲ್ಲಿ ವಾದ ಮಂಡಿಸುವ ವಕೀಲರಿಗೆ ಇದೀಗ ತಾತ್ಕಾಲಿಕವಾಗಿ ಮುಕ್ತಿ ಸಿಕ್ಕಿದ್ದು, ಬೇಸಿಗೆಯ ದಿನಗಳಲ್ಲಿ ವಕೀಲರು ಕೋರ್ಟ್ ಧರಿಸದಿದ್ದರೂ ಕೂಡ ನಡೆಯುತ್ತದೆ. ಆದರೆ ಕಪ್ಪು ಕೋರ್ಟ್ ಹೊರದಾಗಿ ಯಾವ ಜರಿಸನ್ನು ಧರಿಸಬೇಕು ಎಂಬುದರ ಕುರಿತು ಇದೀಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.