Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಏಪ್ರಿಲ್ 24 ರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಏಪ್ರಿಲ್ 24 ರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

    April 20, 2024
    Share

    ಮಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿ ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಬ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವದೇ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಅಧಿಕಾರಿ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು, ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ -19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವುದು. ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಮೇಲ್ಕಂಡ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕೋಡ್ರ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಸಿಬ್ಬಂದಿಗಳು ಹೊರತುಪಡಿಸಿ)ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನೂ ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೋಟೆಲ್‍ ಗಳು ಮತ್ತು ಅತಿಥಿ ಗ್ರಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರೆಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 272

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.