Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಉಡುಪಿ: ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

    April 23, 2024
    Share

    ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ ನಡೆಯಲಿದ್ದು ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು, ಸ್ಟಾರ್‌ ಕ್ಯಾಂಪೇನರ್‌ಗಳು, ಮೆರವಣಿಗೆ ಅಯೋಜಕರು ಎ. 24ರ ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

    ಚುನಾವಣೆ ಸಿದ್ಧತೆ ಹಾಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ತಮ್ಮ ಕಚೇರಿಯಲ್ಲಿ ಸಭೆಯಲ್ಲಿ ಮಾತನಾಡಿ, ಮತದಾನ ದಿನದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರ, ಧ್ವನಿವರ್ಧಕಗಳ ಬಳಕೆಗೆ ಅವಕಾಶ ಇರುವುದಿಲ್ಲ.

    ಹಾಗೆಯೇ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸಂಬಂಧಪಟ್ಟ ಅಭ್ಯರ್ಥಿಗಳು ಅಥವಾ ಪಕ್ಷವು ಮಾಧ್ಯಮ ಪ್ರಾಮಾಣೀಕರಣ ಸಮಿತಿಯಿಂದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು. ಯಾವುದೇ ಚುನಾವಣೋತ್ತರ ಸಮೀಕ್ಷೆ ಹಾಗೂ ಸಮೀಕ್ಷಾ ಫಲಿತಾಂಶ ಪ್ರಚಾರಪಡಿಸುವಂತಿಲ್ಲ. ಎ. 24ರ ಸಂಜೆ 5ರಿಂದ ಎ. 26ರ ಮಧ್ಯರಾತ್ರಿ 12ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದೆ ಎಂದರು. ವಾರ್ತಾಧಿಕಾರಿ ಮಂಜುನಾಥ್‌ ಬಿ., ತಹಶೀಲ್ದಾರ್‌ ಗುರುರಾಜ್‌, ಅಭ್ಯರ್ಥಿಗಳು, ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

    Post Views: 256

    Related Posts

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.