Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ

    April 26, 2024
    Share

    ಮಂಗಳೂರು: ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು. ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು.

    ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು.

    ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

    ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.