Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರು ಮಾಜಿ ಕಮೀಷನರ್​​​ ಭಾಸ್ಕರ್​ ರಾವ್​ ಕಾರ್​ಗೆ ಭೀಕರ ಅಪಘಾತ
    ಇತ್ತೀಚಿನ ಸುದ್ದಿ

    ಬೆಂಗಳೂರು ಮಾಜಿ ಕಮೀಷನರ್​​​ ಭಾಸ್ಕರ್​ ರಾವ್​ ಕಾರ್​ಗೆ ಭೀಕರ ಅಪಘಾತ

    May 3, 2024
    Share

    ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಭೀಕರ ಕಾರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

    ಈ ಬಗ್ಗೆ ಖುದ್ದು ಭಾಸ್ಕರ್​ ರಾವ್​ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಘಟನೆ ವಿವರಿಸಿದ್ದಾರೆ. ಅಷ್ಟೇ ಅಲ್ಲದೇ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿಗೆ ಮನವಿ ಮಾಡಿದ್ದಾರೆ. ಎಪ್ರಿಲ್ 23 ರಂದು ಟಯೋಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್‌ನಲ್ಲಿ ಅನಂತಪುರ ಮತ್ತು ಕದ್ರಿ (ಆಂಧ್ರಪ್ರದೇಶ) ನಡುವೆ ಚಾಲನೆ ಮಾಡುವಾಗ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಯಾವುದೇ ಎಚ್ಚರಿಕೆ ಫಲಕಗಳಿಲ್ಲದ ಕಾರಣ ಟಿಪ್ಪರಿಗೆ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

    ನಮ್ಮ ಕಾರು ಮೂರು ಬಾರಿ ಪಲ್ಟಿಯಾಗಿದ್ದು ನಾವೆಲ್ಲರೂ ಅಪಾಯದಿಂದ ಪಾರಾಗಿದ್ದೇವೆ. ವೆಂಕಿ ತೀವ್ರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪಕ್ಕೆಲುಬುಗಳು ಮುರಿದಿದ್ದು, ಸೀಟ್‌ಬೆಲ್ಟ್ ಮತ್ತು ಏರ್‌ಬ್ಯಾಗ್‌ಗಳು ನಮ್ಮನ್ನು ಉಳಿಸಿದೆ. ಅಪಘಾತವಾದ ನಂತರ ನಮ್ಮನ್ನು ಕಾರಿನಿಂದ ಹೊರಗೆ ಎಳೆದು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆಂಧ್ರಪ್ರದೇಶ ಸರ್ಕಾರದ ಆರೋಗ್ಯ ಕೇಂದ್ರವನ್ನು ಮೆಚ್ಚಲೇಬೇಕು. ಅಂಬುಲೆನ್ಸ್‌ ಮೂಲಕ ನನ್ನನ್ನು ಅನಂತಪುರಕ್ಕೆ ದಾಖಲಿಸಲಾಯಿತು. ಉತ್ತಮ ಕೆಲಸ ಮಾಡಿದ್ದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ.ಅತ್ಯುತ್ತಮ ಹೆದ್ದಾರಿಗಳ ಜೊತೆಗೆ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಈ ಅಪಘಾತದ ತನಿಖೆ ನಡೆಸುವಂತೆ ಟಯೋಟಾ ಕಂಪನಿಗೆ ವಿನಂತಿಸಿದ್ದಾರೆ.

    Post Views: 381

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.