Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯ ಶಂಕೆ?
    ಇತ್ತೀಚಿನ ಸುದ್ದಿ

    ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯ ಶಂಕೆ?

    May 7, 2024
    Share

    ಬಂಟ್ವಾಳ: ಇಲ್ಲಿನ ಬಿ‌.ಸಿ.ರೋಡಿನಲ್ಲಿರುವ ಲಾಡ್ಜ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣಿಗೆ ಶರಣಾದ ವ್ಯಕ್ತಿ. ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ಪ್ರಜ್ವಲ್ ರೂಂ ಬುಕ್ ಮಾಡಿಕೊಂಡಿದ್ದಾನೆ. ಮೇ 6ರಂದು ರಾತ್ರಿಯೂ ಅವರು ಅಲ್ಲಿ ಉಳಿದುಕೊಂಡಿದ್ದರು. ಆದರೆ ಮಂಗಳೂರು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹದ ಪತ್ತೆಯಾಗಿದೆ. ಆನ್ಸೆನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಹಣ ಸಾಲದ ವಿಚಾರದಲ್ಲಿ ಚಿಂತೆಗೀಡಾಗಿದ್ದಾರೆ. ಅಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್‌ ಇನ್ ಸ್ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.

    Post Views: 248

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.