ಪುತ್ತೂರು: ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ನಿವೃತ್ತ ಉಪನ್ಯಾಸಕ ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಅವರು ನಿಧನರಾಗಿದ್ದಾರೆ
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಅವರಿಗೆ ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ.ಆರ್, ಸುಪ್ರಿಯ ಪಿ.ಆರ್, ಮಗ ಹರ್ಷವರ್ಧನ ಪಿ.ಆರ್ ಹಾಗೂ ಅಳಿಯ ಕೃಷ್ಣ ಎಂ.ವಿ, ಜಯಪಾಲ್ ಎಚ್.ಆರ್. ಸೊಸೆ ಸುಧಾ ಟಿ.ಜೆ ಹಾಗೂ ಮೊಮ್ಮಕ್ಕಳು ಸುಹೃತ್, ಸಹಜ, ನಿಸ್ವನ, ಅವಲೋಕಿತ, ನಲ್ಮೆ, ಆತ್ಮೀಯ ಇದ್ದಾರೆ.
ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಅವರ ಮನೆಯಾದ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ